ಉಡುಪಿ: ಮಾರ್ಚ್ 20:ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ನೇ ಸಾಲಿನ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬಹುಮಾನಕ್ಕಾಗಿ ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದು. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರ ಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್ 29ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಸಿಕೊಡಬಹುದಾಗಿದೆ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ಅಥವಾ ವೆಬ್‌ಸೈಟ್ -https://kpp.karnataka.gov.in- ದೂರವಾಣಿ ಸಂಖ್ಯೆ, 080-22484516, 22107704ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.