ಬೆಂಗಳೂರು,:ಮಾರ್ಚ್ 21: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ್ದಾರೆಂದು ವಿಧಾನಸಭೆ ಕಲಾಪದಿಂದ ಆರು ತಿಂಗಳು 18 ಸದಸ್ಯರನ್ನು ಅಮಾನತುಗೊಳಿಸಿದ್ದಾರೆ.
ಸ್ಪೀಕರ್ ಯುಟಿ ಖಾದರ್ ಅವರು ಸದನದಲ್ಲಿಅಮಾನತುಗೊಳಿಸಿದವರನ್ನು ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಬಂದು ಹೊರಹಾಕಿದರು.
ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್., ಸಿ.ಕೆ. ರಾಮಮೂರ್ತಿ. ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ., ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.
ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಸದನದ ಬಾವಿಗಿಳಿದು ಧರಣಿ ನಡೆಸಿದ್ದಾರೆ. ಇನ್ನು ಬಿಜೆಪಿಗೆ ಮೈತ್ರಿ ಪಕ್ಷ ಜೆಡಿಎಸ್ ಸದಸ್ಯರು ಸಹ ಬೆಂಬಲಿಸಿದ್ದಾರೆ. ಎನ್ನಲಾಗಿದೆ