ಉಡುಪಿ: ಮಾರ್ಚ್ 22:ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆಯ ಸಮಸ್ತ ಮೀನುಗಾರರ ವತಿಯಿಂದ ಮಲ್ಪೆ ಬಂದರಿನ ಮೀನುಗಾರರ ಬಗ್ಗೆ ಅದ ಅಪಪ್ರಚಾರದ ಬಗ್ಗೆ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು
ಪ್ರತಿಭಟನಾ ಸಭೆಯಲ್ಲಿಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಸುವರ್ಣ, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ವಿವಿಧ ಮೀನುಗಾರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾವಿರಾರು ಮೀನುಗಾರರು ಉಪಸ್ಥಿತರಿದ್ದರು.