ಉಡುಪಿ: ಮಾರ್ಚ್ 23:ಸರಕು ಸಾಗಿಸುತ್ತಿದ್ದ ಲಾರಿಗೆ ಬೈಕ್ ಅಡ್ಡ ಬಂದ ಕಾರಣ ಅಪಘಾತ ತಪ್ಪಿಸಲು ಹೋಗಿ ಲಾರಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಸಮೀಪ ಇಂದು ಮಧ್ಯಾಹ್ನ ನಡೆದಿದೆ
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ಸಾಗಿಸುತ್ತಿದ್ದ ಲಾರಿಗೆ ಬೈಕೊಂದು ಅಡ್ಡ ಬಂದಿದೆ. ಅಪಘಾತ ತಪ್ಪಿಸಲು ಲಾರಿ ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಲಾರಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.