ಮಂಗಳೂರು: ಮಾರ್ಚ್ 24: ರೆಸಾರ್ಟ್’ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಪ್ರವಾಸಿಗ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಡಿಕೇರಿ ಕುಶಾಲನಗರದ ಮೂಲದ ಪ್ರವಾಸಿ ನಿಶಾಂತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಈ ಅವಘಡ ಸಂಭವಿಸಿದೆ.
ನಿಶಾಂತ್ ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಖಾಸಗಿ ರೆಸಾರ್ಟ್ ನಲ್ಲಿ ಸ್ವಿಮ್ಮಿಂಗ್ ಫೂಲ್ ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.