ಉಡುಪಿ : ಮಾರ್ಚ್ 27: ಉಡುಪಿ ನಗರಸಭೆಯ ಚಿಟ್ಪಾಡಿ ವಾರ್ಡಿನ ಬೇಡಿಕೆ ಹಾಗೂ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆದ್ಯತೆಯ ಮೇರೆಗೆ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು
ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಚಿಟ್ಪಾಡಿ ವಾರ್ಡಿನ ಬೇಡಿಕೆ ಹಾಗೂ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆದ್ಯತೆಯ ಮೇರೆಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು
ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಶ್ರೀ ಕೃಷ್ಣ ರಾವ್ ಕೊಡಂಚ, ಮಾಜಿ ನಗರಸಭಾ ಸದಸ್ಯರಾದ ಶ್ರೀ ನವೀನ್ ಭಂಡಾರಿ, ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶ್ರೀವತ್ಸ ಹಾಗೂ ವಾರ್ಡಿನ ನಾಗರಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.