ಬೆಂಗಳೂರು: ಮಾರ್ಚ್ 27:ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ.
ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು ಹೆಚ್ಚಳ ಮಾಡಬೇಕೆಂಬ ಬಗ್ಗೆ ಸಮಾಲೋಚನೆ ಮಾಡಲಾಯಿತು. ಅಂತಿಮವಾಗಿ 4 ರೂಪಾಯಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಬಹುತೇಕ ಬರುವ ಏಪ್ರಿಲ್ 1ರಿಂದಲೇ ಅನ್ವಯವಾಗುವಂತೆ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ.
ದರ ಏರಿಕೆ ವಿವರ ಇಲ್ಲಿದೆ
ಹೋಮೋಜಿನೆಸ್ಟ್ ಟೋನ್ಡ್ ಹಾಲು :ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಡ್ ಹಾಲು ಅರ್ಧ ಲೀಟರ್ 24 ರೂಪಾಯಿ ಇದ್ರೆ, ಇದೇ ಹಾಲು ಒಂದು ಲೀಟರ್ 45 ರೂಪಾಯಿ ಇದೆ. ಈಗ ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.
ನೀಲಿ ಪ್ಯಾಕೆಟ್ ಹಾಲು – 44 ರೂ.ದಿಂದ 48 ರೂ. ಏರಿಕೆ(ಪ್ರತಿ ಲೀಟರ್‌ಗೆ).
ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
ಸಮೃದ್ಧಿ ಹಾಲಿನ ಪ್ಯಾಕೆಟ್: 56 ರೂ. ನಿಂದ 60 ರೂ.
ಗ್ರೀನ್ ಸ್ಪೇಷಲ್ ಹಾಲು: 54 ರೂ. ನಿಂದ 58 ರೂ.
ನಾರ್ಮಲ್ ಗ್ರೀನ್ ಹಾಲು: 52 ರೂ. ನಿಂದ 56 ರೂ.