ಸಾಲಿಗ್ರಾಮ: ಮಾರ್ಚ್ 29:ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಐವರು ಬಸ್ ಪ್ರಯಾಣಿಕರು ಗಾಯಗೊಂಡ ಘಟನೆ ಮಾ.28ರಂದು ಸಾಲಿಗ್ರಾಮ ಆಂಜನೇಯ ದೇವಸ್ಥಾನದ ಮುಂಭಾಗ ದಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಐವರು ಪ್ರಯಾಣಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಢಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ ಎಂಬ ಮಾಹಿತಿ ಲಭ್ಯ ವಾಗಿದೆ