ಉಡುಪಿ: ಮಾರ್ಚ್ 31: ಬುಲ್ ಟ್ರಾಲ್, ಲೈಟ್ ಫಿಶಿಂಗ್ ನಿಷೇಧ ಉಲ್ಲಂಘನೆ ಮಾಡಿದ್ದಲ್ಲಿ ದೋಣಿ ಪರವಾನಿಗೆ ರದ್ದುಗೊಳಿಸೋದಾಗಿ ಮೀನುಗಾರಿಕೆ ಇಲಾಖೆ ಎಚ್ಚರಿಕೆ ನೀಡಿದೆ
ಕೇಂದ್ರ ಸರಕಾರ ಸಮುದ್ರದಲ್ಲಿ ಕೃತಕ ಬೆಳಕು ಬಳಸಿ ಮೀನು ಹಿಡಿಯುವುದು ಮತ್ತು ಬುಲ್ಟ್ರಾಲ್ ಮೀನು ಗಾರಿಕೆಯನ್ನು ಸಂಪೂರ್ಣವಾಗಿ ನಿಷೇ ಧಿಸಿದ್ದರೂ ಜಿಲ್ಲೆಯಲ್ಲಿ ಬೆಳಕು ಹಾಕಿ ಮೀನು ಹಿಡಿಯುವುದು ವರದಿಯಾಗುತ್ತಿದೆ. ಇಂಥ ದೋಣಿಗಳ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ಮೀನುಗಾರಿಕೆ ಇಲಾಖೆ ಎಚ್ಚರಿಕೆ ನೀಡಿದೆ.
ಈ ಸಂಬಂಧ ರಾಜ್ಯ ಹೈಕೋರ್ಟ್ನಲ್ಲೂ ಪ್ರಕರಣ ದಾಖಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ನಿರ್ದೇಶಿಸಲಾಗಿದೆ.
ಹೈಕೋರ್ಟ್ ನಿರ್ದೇಶನ ಹಾಗೂ ಸರಕಾರದ ಆದೇಶಗಳನ್ನು ಉಲ್ಲಂಘಿಸಿ ಮೀನುಗಾರಿಕೆಯಲ್ಲಿ ತೊಡಗುವ ದೋಣಿಗಳ ಪರವಾನಿಗೆ ಹಾಗೂ ದೋಣಿ ನೋಂದಣಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು. ಅಂತಹ ದೋಣಿಗಳಿಗೆ ಡೀಸೆಲ್ ವಿತರಣೆ ನಿಲ್ಲಿಸಲಾಗುವುದು. ಎಚ್ಚರಿಕೆ ಬಳಿಕವೂ ಪುನರಾವರ್ತಿಸಿದ್ದಲ್ಲಿ ಶಾಶ್ವತವಾಗಿ ಅಂತಹ ದೋಣಿಗಳ ನೋಂದಣಿ ಯನ್ನು ರದ್ದುಗೊಳಿಸಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.