ಉಡುಪಿ: ಏಪ್ರಿಲ್ 01 :ಭಾರತೀಯ ಜನತಾ ಪಾರ್ಟಿ ಉಡುಪಿ ವಿಧಾನಸಭಾ ಕ್ಷೇತ್ರದ ವತಿಯಿಂದ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿ ಮಲತಾಯಿ ಧೋರಣೆಯನ್ನು ತಳೆದು ತುಘಲಕ್ ಮಾದರಿ ಆಡಳಿತ ನಡೆಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ ಮಾರ್ಚ್ 31 ರಂದು ಹಮ್ಮಿಕೊಳ್ಳಲಾಗಿತ್ತು
ಪ್ರತಿಭಟನಾ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಕುಂದಾಪುರ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ಸುನೀಲ್ ಕುಮಾರ್, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಗುರುರಾಜ್ ಗಂಟಿಹೊಳೆ, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಪುತ್ತೂರು, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್, ಪಕ್ಷದ ಜಿಲ್ಲಾ ಹಾಗೂ ಮಂಡಲಗಳ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.