ಬ್ರಹ್ಮಾವರ :ಏಪ್ರಿಲ್ 01: ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ ಯಾಗಿ ಅಪಘಾತ ಸಂಭವಿಸಿದೆ. ತಕ್ಷಣ ಬಾಲಕನನ್ನು ಹತ್ತಿರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು ವಂಶಿ ಜಿ ಶೆಟ್ಟಿ ಎಂದು ಗುರುತಿಸಲಾಗಿದೆ.
ಘಟನೆಯ ಬಳಿಕ ಆಸ್ಪತ್ರೆಯ ಬಳಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ, ಸಂಬಂಧಪಟ್ಟವರು ಶೀಘ್ರದಲ್ಲಿ ಇತ್ತ ಗಮನಹರಿಸಬೇಕಾಗಿದೆ