ಬ್ರಹ್ಮಾವರ: ಏಪ್ರಿಲ್ 02 :ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಸಮೀಪ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಇಂದು ಎ.2ರ ಬುಧವಾರ ಸಾರ್ವಜನಿಕರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಬ್ರಹ್ಮಾವರದ 30ಕ್ಕೂ ಅಧಿಕ ಸಂಘ ಸಂಸ್ಥೆಗಳ, ಶಿಕ್ಷಣ ಸಂಸ್ಥೆಗಳ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಸಿಟಿ ಸೆಂಟರ್‌ನಿಂದ ಎಸ್.ಎಂ.ಎಸ್. ಮೂಲಕ ದೂಪದಕಟ್ಟೆ ತನಕ ತುರ್ತು ಸರ್ವಿಸ್ ರಸ್ತೆ ನಿರ್ಮಿಸುವಂತೆ, ಶಾಶ್ವತ ಪರಿಹಾರವಾಗಿ ಫ್ಲೈ ಓವರ್ ನಿರ್ಮಿಸುವಂತೆ ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು
ಈ ಹೆದ್ದಾರಿ ಯಲ್ಲಿ ಪ್ರತಿನಿತ್ಯ ಅಪಘಾತಗಳಾಗುತ್ತಿವೆ.ನೂರಾರು ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿರುವ ಬಗ್ಗೆ ಆಕ್ರೋಶ ವ್ಯಕ್ತವಾಯಿತು. ಒಂದು ವಾರದೊಳಗೆ ಸೂಕ್ತ ಪರಿಹಾರ ಕಂಡುಕೊಂಡು ಸರ್ವಿಸ್ ರಸ್ತೆಯ ಕಾಮಗಾರಿ ಪ್ರಾರಂಭವಾಗದಿದ್ದಲ್ಲಿ ಬ್ರಹ್ಮಾವರ ಬಂದ್ ಮಾಡುವ ಎಚ್ಚರಿಗೆ ನೀಡಲಾಯಿತು.