ಉಡುಪಿ :ಏಪ್ರಿಲ್ 03 : ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದರ್ಶನ ಪಡೆದರು.
ದೇವಾಲಯದ ಪ್ರಧಾನ ಅರ್ಚಕರು ಗೌರವ ಸೂಚಕವಾಗಿ ಅವರಿಗೆ ಪ್ರಸಾದ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ್ ಶೆಟ್ಟಿ, ನಿರ್ವಹಣಾ ಸಮಿತಿಯ ಸದಸ್ಯರು ಮತ್ತು ಭಕ್ತರು ಉಪಸ್ಥಿತರಿದ್ದರು.