ಬೆಂಗಳೂರು: ಏಪ್ರಿಲ್ 13 : ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.
ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.