ಉಡುಪಿ:ನಗರದ ಸುತ್ತಮುತ್ತ ಶುಕ್ರವಾರ ಕೆಲಕಾಲ ಹನಿಹನಿ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಪರ್ಕಳ, ಕಟಪಾಡಿ, ಕಾಪು ಭಾಗದಲ್ಲಿ ಬೆಳಗ್ಗೆ ಸಣ್ಣದಾಗಿ ಮಳೆಯಾಗಿದ್ದು, ಬೆಳಗ್ಗೆ ಮತ್ತು ಸಂಜೆ ವೇಳೆ ಮೋಡ ಕವಿದ ವಾತಾವರಣವಿತ್ತು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಶುಕ್ರವಾರ ಬೆಳಗ್ಗೆ ಮಳೆಯಾದ ವರದಿಯಾಗಿದೆ. ಮಂಗಳೂರು ನಗರದ ಕೆಲವು ಕಡೆಗಳಲ್ಲಿ, ಪುತ್ತೂರು ನಗರ ಸಹಿತ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಕೆಲವು ಕಡೆ ಹನಿ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 6ರಿಂದ 9ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಶುಕ್ರವಾರ 34.2 ಡಿ.ಸೆ. ಗರಿಷ್ಠ ಮತ್ತು 25.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.