ಉಡುಪಿ : ಉಡುಪಿಯ ಇಂದ್ರಾಳಿ ರೈಲ್ವೆ ಟ್ರ್ಯಾಕ್ ಬಳಿ ನಿನ್ನೆ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದೆ. ನಿಲ್ದಾಣದ ದೂರದಲ್ಲಿ ಮರಗಳನ್ನು ಕಡೆದು ಹಾಕಲಾಗಿತ್ತು ಆಕಸ್ಮಿಕವಾಗಿ ಹುಲ್ಲಿಗೆ ಬೆಂಕಿ ಹಚ್ಚಿಕೊಂಡಿದ್ದರಿಂದ ಬೆಂಕಿ ಅವಘಡ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ
.