ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು ಸಮಿತಿಯ ಆಂಬುಲೆನ್ಸ್ ಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಅವಶ್ಯಕತೆ ಇರುವುದನ್ನು ಮನಗಂಡ ಲಯನ್ಸ್ ಕ್ಲಬ್ ಇಂದ್ರಾಳಿಯು ಆಕ್ಸಿಜನ್ ಕಾನ್ಸನ್ಟ್ರೇಟರ್ ಅನ್ನು ನಾಗರಿಕ ಸಮಿತಿಯ ಸಂಚಾಲಕರಾದ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಇಂದ್ರಾಳಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಮೋಹನ್ ಶೆಟ್ಟಿ, ಬಡಗು ಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಡುಪಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೇರಿಗಾರ್, ಶಾಖ ವ್ಯವಸ್ಥಾಪಕರಾದ ಪ್ರವೀಣ್ ಮೊದಲಾದವರು ಉಪಸ್ಥಿತರಿದ್ದರು.