ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸರಾಜ ಬೊಮ್ಮಾಯಿ ರಾಜೀನಾಮೆಗೆ ಮುಂದಾಗಿದ್ದಾರೆ.
ಇಂದು ಸಂಜೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಾವು ನಿರ್ಧಿಷ್ಠ ಮಟ್ಟದಲ್ಲಿ ಗೆಲುವು ಸಾಧಿಸಲಾಗಲಿಲ್ಲ. ಸಂಪೂರ್ಣ ಫಲಿತಾಂಶ ಬಂದ ನಂತರ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಉತ್ತಮ ಫಲಿತಾಂಶ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.