ಬೆಂಗಳೂರು: ಇಂದು ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿಎಂ ಆಯ್ಕೆ ಬಗ್ಗೆ ಚರ್ಚೆ ಕೂಡ ನಡೆಯಲಿದ್ದು, ಸಿಎಂ ಯಾರು ಎಂಬುದಾಗಿ ಘೋಷಣೆಯನ್ನು ಮಾಡಲಾಗುತ್ತದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಕರ್ನಾಟಕ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಮೊದಲ ಸಭೆಯನ್ನು ಭಾನುವಾರ ಸಂಜೆ 5:30 ಕ್ಕೆ ಕರೆಯಲಾಗಿದೆ’ ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಅದರಲ್ಲೂ ದಾಖಲೆ ಎನ್ನುವಂತೆ 42 ಹೊಸಬರಿಗೆ ನೀಡಿದ್ದಂತ ಕ್ಷೇತ್ರಗಳಲ್ಲಿ 35 ಮಂದಿ ಗೆಲುವು ಸಾಧಿಸಿದ್ದಾರೆ.
ಮತ್ತೊಂದೆಡೆ ಇಂದು ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿಎಂ ಆಯ್ಕೆ ಬಗ್ಗೆ ಚರ್ಚೆ ಕೂಡ ನಡೆಯಲಿದ್ದು, ಸಿಎಂ ಯಾರು ಎಂಬುದಾಗಿ ಘೋಷಣೆಯನ್ನು ಮಾಡಲಾಗುತ್ತದೆ.