ಮಲ್ಪೆ: ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀ ವಾಕ್ ಪ್ರದೇಶಗಳಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಮೇ 16ರಿಂದ ಸೆ. 15ರ ವರೆಗೆ ಸ್ಥಗಿತಗೊಳಿಸಲಾಗಿದ್ದು, ಜಲಸಾಹಸ ಕ್ರೀಡಾ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ.
ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.