ಕಟೀಲು: : ಸಮೀಪದ ಕಟೀಲು ದುರ್ಗಾಪರಮೇಶ್ವರಿ ದೇಗುಲ ಮುಂಭಾಗದಲ್ಲಿ ಬುಧವಾರ ಮಧ್ಯಾಹ್ನ 2.45ರ ಸುಮಾರಿಗೆ ಎಂಆರ್‌ಪಿಎಲ್‌ನ ಬಸ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಧಗ ಧಗನೆ ಹೊತ್ತಿ ಉರಿಯಿತು. ತಕ್ಷಣವೇ ದೇವಸ್ಥಾನದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ ಬಸ್ಸಿನಲ್ಲಿದ್ದ ಮೂವರು ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ
ಘಟನೆಯಿಂದ ದೇವಳದ ಆವರಣ ಹಾಗೂ ಸ್ಥಳೀಯರು ಭಯಭೀತರಾಗಿದ್ದು ಕೂಡಲೇನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ ಎಂದು ತಿಳಿದುಬಂದಿದೆ.