ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ರಾಜಾಂಗಣ ಸಭಾಭವನದ ಪ್ರವೇಶ ದ್ವಾರದ ಬಳಿ ಕಸ, ತ್ಯಾಜ್ಯಗಳನ್ನು ಸಂಗ್ರಹಿಸಿ ಇಡಲಾಗಿದ್ದು, ಇದರಿಂದ ಭಕ್ತರು ಮೂಗು ಮುಚ್ಚಿಕೊಂಡು ದೇವರ ದರ್ಶನ ಮಾಡಬೇಕಾದ ಪರಿಸ್ಥಿತಿ ಉದ್ಭವಿಸಿದೆ.
ತ್ಯಾಜ್ಯ ರಾಶಿಯಿಂದ ದಕ್ಷಿಣ ಭಾರತದ ಪವಿತ್ರ ತೀರ್ಥಕ್ಷೇತ್ರವಾದ ಶ್ರೀಕೃಷ್ಣಮಠ ಪರಿಸರದ ಅಂದವೂ ಹಾಳಾಗಿದೆ.
ಪವಿತ್ರ ಕ್ಷೇತ್ರಕ್ಕೆ ಇದು ಕಪ್ಪು ಚುಕ್ಕೆಯಾಗಿದೆ. ಅಲ್ಲದೆ, ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಆತಂಕವೂ ಹೆಚ್ಚಾಗಿದೆ. ಹಾಗಾಗಿ ಸಂಬಂಧಪಟ್ಟವರು ತಕ್ಷಣವೇ ಎಚ್ಚೆತ್ತುಕೊಂಡು ತ್ಯಾಜ್ಯಗಳನ್ನು ವಿಲೇವಾರಿಗೊಳಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.