ಕರ್ನಾಟಕದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನ ಆಯ್ಕೆಯ ಬಳಿಕ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕರನ್ನು ಆಹ್ವಾನಿಸಲಾಗಿದೆ. ಇಂದು ಸಂಜೆ 7ಗಂಟೆಗೆ ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭೆ ಸದಸ್ಯರುಗಳು, ವಿಧಾನಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಗೆ ಎಲ್ಲಾ ಸದಸ್ಯರುಗಳು ತಪ್ಪದೇ ಭಾಗವಹಿಸಬೇಕಾಗಿ ಕೋರಲಾಗಿದೆ.
ಫಲಿತಾಂಶ ಬಂದ ನಂತರ ಹೈಕಮಾಂಡ್ ಮಟ್ಟದಲ್ಲಿ ಸಿಎಂ ಸ್ಥಾನದ ಬಗ್ಗೆ ಚರ್ಚೆ ಸಭೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇದ್ದವು. ಆದರೀಗ ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ ಆದರೆ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎನ್ನುವ ಒಪ್ಪಂದದ ಮೇಲೆ ಡಿಕೆ ಶಿವಕುಮಾರ್ ತಮ್ಮ ಸಿಎಂ ಆಸೆಯಿಂದ ದೂರ ಸರಿದಿದ್ದಾರೆ ಎನ್ನಲಾಗುತ್ತಿದೆ. ಪಕ್ಷದ ಹಿತ ದೃಷ್ಟಿಯಿಂದ ಡಿಕೆ ಶಿವಕುಮಾರ್ ಸಿಎಂ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ ಎನ್ನಲಾಗುತ್ತಿದೆ.