ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಾಮನ್ ವಿಶ್ವನಾಥನ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದರು.
ಇಬ್ಬರು ಹೊಸ ನ್ಯಾಯಾಧೀಶರ ನೇಮಕದೊಂದಿಗೆ ಸುಪ್ರೀಂ ಕೋರ್ಟ್ ಒಟ್ಟು 34 ನ್ಯಾಯಾಧೀಶರ ಬಲವನ್ನು ಹೊಂದಿದೆ.
ಮೇ 16 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಇಬ್ಬರ ಪದೋನ್ನತಿಗೆ ಶಿಫಾರಸು ಮಾಡಿತ್ತು ಹಾಗೂ ಕೇಂದ್ರ ಸರಕಾರವು ಈ ಇಬ್ಬರ ನೇಮಕಾತಿಯ ಕುರಿತು ಮೇ 18ರಂದು ಅಧಿಸೂಚನೆ ಹೊರಡಿಸಲಾಗಿತ್ತು.
ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ನೇರಪ್ರಸಾರ ಮಾಡಲಾಯಿತು.