ಉಡುಪಿ, ಮೇ 19; ಉಡುಪಿ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಸಿಹಿಸುದ್ದಿ. ಉಪ ಯೋಜನಾ ನಿರ್ದೇಶಕ ಮತ್ತು ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ತಕ್ಷಣ ಅರ್ಜಿ ಹಾಕಬಹುದು.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಉಳ್ಳೂರು, ಗುಲ್ವಾಡಿ ಹಾಗೂ ಯಡಮೊಗೆ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ ತಲಾ 1 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜೂನ್ 1 ಕೊನೆಯ ದಿನವಾಗಿದೆ. ಅರ್ಜಿ ನಮೂನೆ, ಮೀಸಲಾತಿ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಎಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ