ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2000 ರೂಪಾಯಿ ನೋಟುಗಳನ್ನು ಇನ್ಮುಂದೆ ಮುದ್ರಿಸುವುದಿಲ್ಲ ಎಂದು ಘೋಷಿಸಿದೆ. ಅಲ್ಲದೆ ಚಲಾವಣೆಯಲ್ಲಿರುವ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ತಿಳಿಸಿದೆ. ಜನರ ಬಳಿ ಇರುವ 2000 ನೋಟುಗಳನ್ನು ಬ್ಯಾಂಕ್ಗಳಿಗೆ ಹೋಗಿ ವಿನಿಮಯ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಸೆಪ್ಟೆಂಬರ್ 30ರ ತನಕ ನೋಟುಗಳ ವಿನಿಮಯ ಮಾಡಿಕೊಳ್ಳಲು ಆರ್‌ಬಿಐ ತಿಳಿಸಿದೆ.
2000 ರೂಪಾಯಿ ನೋಟನ್ನು ಚಲಾವಣೆಯಿಂದ ಹಿಂಪಡೆಯಲಾಗಿದೆ ಎಂದು ಆರ್‌ಬಿಐ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ ಆದರೆ ಇದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ. 2000 ಮುಖಬೆಲೆಯ ನೋಟುಗಳನ್ನು 2018-19 ಪ್ರಿಂಟ್ ಮಾಡುವುದನ್ನ ಆರ್‌ಬಿಐ ನಿಲ್ಲಿಸಿತ್ತು. 2,000 ರೂಪಾಯಿಯ ಈ ನೋಟನ್ನು ನವೆಂಬರ್ 2016 ರಲ್ಲಿ ಪರಿಚಯಿಸಲಾಗಿತ್ತು
ಆರ್‌ಬಿಐ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ತಮ್ಮ ಬಳಿ ಇರುವ 2,000 ರೂಪಾಯಿ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ಬ್ಯಾಂಕ್ಗಳಲ್ಲಾದರೂ ಜಮಾ ಮಾಡಬಹುದು. ಇನ್ನು 2,000 ರೂಪಾಯಿ ನೋಟು ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಿದೆ.