ಬೆಂಗಳೂರು: ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ.
ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ನೂತನ ಸಚಿವರು ಸಹ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕರ್ನಾಟಕದ ಉಪಮುಖ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.