ಉಡುಪಿ: ಉಡುಪಿ ಕಾಂಗ್ರೆಸ್ ಭವನದ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕರ್ನಾಟಕ ಸರಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭ ಪಟಾಕಿ ಸಿಡಿಸಿˌ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.