ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ(ಡಿಜಿ, ಐಜಿಪಿ) ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ.ಅಲೋಕ್ ಮೋಹನ್ ಅವರನ್ನು ನೇಮಕ ಮಾಡಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ನೇಮಕ ಮಾಡಲಾಗಿದೆ