ಕಾರ್ಕಳ : ಧರ್ಮಸ್ಥಳ ಕ್ಷೇತ್ರಕ್ಕೆ ಶಿರಸಿ. ಸಿದ್ದಾಪುರ ಮೂಲದ ಕುಟುಂಬ ವೊಂದು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಚೌಕಿ ಸೇತುವೆ ಸಮೀಪ ಅಪಘಾತಕ್ಕಿಡಾಗಿ ಐವರು ಗಾಯಗೊಂಡ ಘಟನೆ ಇಂದು ಮೇ 22 ಮುಂಜಾನೆ 3.30 ರ ಹೊತ್ತಿಗೆ ನಡೆದಿದೆ.
ಬೋಲೇರೋ ದಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ ಚಾಲಕನ ನಿಯಂತ್ರಣ ತಪ್ಪಿ ಬೋಲೇರೋ ಮರಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ವಾಹನದಲ್ಲಿದ್ದ ಒಂದು ಮಗು ಇಬ್ಬರು ಮಹಿಳೆಯರು ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಳುಗಳು ಪ್ರಾಣಪಾಯದಿಂದ ಪಾರಾಗಿದ್ದು ನಿದ್ರೆಯ ಮಂಪರಿನಿಂದ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ
ಘಟನೆ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿ ಉದಯ ಹಾಗೂ ವರಂಗ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಅಮೀನ್ 108 ಆಂಬುಲೆನ್ಸ್ ಗೆ ಕರೆ ಮಾಡಿ ಗಾಯಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಧಾಖಲಿಸಲು ಸಹಕರಿಸಿದರು.