ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಯು.ಆರ್. ಸಭಾಪತಿಯವರಿಗೆ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಉಡುಪಿ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಾಹಿತಿ ಬಿ. ಭಾಸ್ಕರ ರಾವ್, ಉದ್ಯಮಿ ಸೂರ್ಯಪ್ರಕಾಶ್ ಅಂಬಲಪಾಡಿ, ಧರ್ಮಗುರು ಮಿಲಿಯಂ ಮಾರ್ಟಿಸ್, ಗಣನಾಥ್ ಎಕ್ಕಾರ್, ಎಂ.ಎ.ಗಪೂರ್, ಪ್ರಸಾದ್ ರಾಜ್ ಕಾಂಚನ್, ದಿವಾಕರ್ ಕುಂದರ್ ಅವರು ಸಭಾಪತಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸಭೆಯಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ದಿನೇಶ್ ಪುತ್ರನ್ ˌ ಬಿ. ನರಸಿಂಹಮೂರ್ತಿ, ಹರೀಶ್ ಕಿಣಿ, ರಮೇಶ್ ಕಾಂಚನ್ ದಿನಕರ್ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ಭಾಸ್ಕರ್ ರಾವ್ ಕಿದಿಯೂರು, ಕುಶಲ ಶೆಟ್ಟಿˌ ವೆರೋನಿಕಾ ಕರ್ನೆಲಿಯೋ ಮೊದಲಾದವರು ಉಪಸ್ಥಿತರಿದ್ದರು.