ಬೆಂಗಳೂರು: ಮೇ. 23 ರ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಲಿದ್ದು, , ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
1) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ನಿಷೇಧವಾಗಿದೆ.
2) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
3) ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.