ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟವಾಗಿದ್ದು, ಜೂನ್ 12 ರಿಂದ ಜೂನ್ 19ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ವೇಳಾಪಟ್ಟಿ :
ಜೂನ್ 12- ಪ್ರಥಮ ಭಾಷೆ
ಜೂನ್ 13- ವಿಜ್ಞಾನ
ಜೂನ್ 14- ದ್ವಿತೀಯ ಭಾಷೆ
ಜೂನ್ 15- ಸಮಾಜ ವಿಜ್ಞಾನ
ಜೂನ್ 16- ತೃತೀಯ ಭಾಷೆ
ಜೂನ್ 17- ಗಣಿತ
ಪ್ರತಿ ದಿನ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:45 ರವರೆಗೆ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆಯ ಪ್ರಾರಂಭದಲ್ಲಿ ನೀಡಲಾಗುತ್ತದೆ. ಪುನರಾವರ್ತಿತ ಶಾಲಾ ಅಭ್ಯರ್ಥಿ ಹಾಗು ಖಾಸಗಿ ಪುನರಾ ವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.