ಕಾಪು, :ಸಾಮಾಜಿಕ ಜಾಲತಾಣಗಳಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ 66 ರಸ್ತೆಯಲ್ಲಿ 1 ಜೀಪು ಹಾಗೂ 3 ಕಾರುಗಳನ್ನು ಅದರ ಚಾಲಕರುಗಳು ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಿಡಿಯೋ ವೈರಲ್ ಆಗುತ್ತಿರುವ ಬಗ್ಗೆ ಮಾಹಿತಿ ನೀಡಿದಂತೆ ಪರಿಶೀಲಿಸಿದಾಗ ಈ ವಿಡಿಯೋ ಕಟಪಾಡಿ ಸಮೀಪದ ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮವರೆಗಿನ ರಾ.ಹೆ 66 ಉಡುಪಿ- ಮಂಗಳೂರು ರಸ್ತೆಯಲ್ಲಿ ಮೇ 19ರಿಂದ ಮೇ 23ರ ಮಧ್ಯಾವಧಿಯಲ್ಲಿ ಮಾಡಿರುವುದು ಎಂದು ತಿಳಿದುಬಂದ ಹಿನ್ನಲೆಯಲ್ಲಿ ಪೊಲೀಸರು ವಿಡಿಯೋದಲ್ಲಿನ ವಾಹನಗಳ ನಂಬ್ರಗಳನ್ನು ಪರಿಶೀಲಿಸಿ ವಾಹನಗಳ ಗುರುತು ಪತ್ತೆ ಹಚ್ಚಿ.ವಾಹನ ಚಾಲಕರು ಮತ್ತು ವಾಹನಗಳನ್ನು ಕಾಪು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್( 24) ಹಾಗೂ ಕುಂಜಿಬೆಟ್ಟು ನಿವಾಸಿ ಮಿಶಾಲುದ್ದೀನ್ (23) ಎಂದು ಗುರುತಿಸಲಾಗಿದೆ. ಇವರ KA 20 MD 6767 ನೇ ನೀಲಿ ಬಣ್ಣದ ಮಹೀಂದ್ರಾ ಜೀಪು, KA 20 MH 9370 ನೇ ಕಪ್ಪು ಬಣ್ಣದ ಕ್ರೆಟಾ ಕಾರು, KA 20 ME 6996 ನೇ ಬಿಳಿ ಬಣ್ಣದ ಫಾರ್ಚುನರ್ ಕಾರು, KA 20 MD 8078 ನೇ ಬಿಳಿ ಬಣ್ಣದ ಸ್ವಿಫ್ಟ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಈ ಬಗ್ಗೆ ಕಾಪು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.