ಬೆಂಗಳೂರು: ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ ಹಸಿವು ನೀಗಿಸುವ ಕಡಿಮೆ ದರದಲ್ಲಿ ಊಟ, ತಿಂಡಿ ಒದಗಿಸುವಂತ ಇಂದಿರಾ ಕ್ಯಾಂಟೀನ್ ಗಳಿಗೆ ( Indira Canteen ) ಅನುದಾನ ಒದಗಿಸದೇ ಅಲ್ಲಲ್ಲಿ ಮುಚ್ಚುವಂತೆ ಆಗಿತ್ತು.
ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಮತ್ತೆ ಇಂದಿರಾ ಕ್ಯಾಂಟೀನ್ ಗಳಿಗೆ ಜೀವ ತುಂಬುವ ಕೆಲಸವನ್ನು ಮಾಡಲಾಗಿದೆ.
ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವಿಟ್ ಮಾಡಿ ಮಾಹಿತಿ ನೀಡಿದ್ದರು. ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ ಸದುದ್ದೇಶದಿಂದ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದಾಗಿ ಕೆಲವು ಮುಚ್ಚಿವೆ, ಹಲವು ಮುಚ್ಚುವ ಸ್ಥಿತಿಯಲ್ಲಿವೆ ಎಂದು ಕಿಡಿಕಾರಿದ್ದಾರೆ.
‘ಗರೀಬಿ ಹಟಾವೋ’ ಘೋಷಣೆಯ ಮೂಲಕ ಬಡತನ ನಿರ್ಮೂಲನೆಯ ಕಾರ್ಯವನ್ನು ಕಾಳಜಿಯಿಂದ ಮಾಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹೆಸರಿನ ಇಂದಿರಾ ಕ್ಯಾಂಟಿನ್ ಗಳನ್ನು ಮುಚ್ಚಲು ನಾವು ಅವಕಾಶ ನೀಡುವುದಿಲ್ಲ. ಅಗತ್ಯ ಸಂಪನ್ಮೂಲ ಒದಗಿಸಿ ಅವುಗಳನ್ನು ಪುನಶ್ಚೇತನಗೊಳಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಗಳು ಸ್ವಸ್ಥ ಮತ್ತು ರುಚಿಕರವಾದ ಊಟ-ತಿಂಡಿಗಳೊಂದಿಗೆ ಜನರ ಸೇವೆ ಶುರುಮಾಡಲಿವೆ. ಹಸಿದವರ ಪಾಲಿಗೆ ಅನ್ನವೇ ದೇವರು ಎಂಬುದಾಗಿ ಹೇಳಿದ್ದಾರೆ.
ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ ಸದುದ್ದೇಶದಿಂದ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದಾಗಿ ಕೆಲವು ಮುಚ್ಚಿವೆ, ಹಲವು ಮುಚ್ಚುವ ಸ್ಥಿತಿಯಲ್ಲಿವೆ.
"ಗರೀಬಿ ಹಟಾವೋ" ಘೋಷಣೆಯ ಮೂಲಕ ಬಡತನ ನಿರ್ಮೂಲನೆಯ ಕಾರ್ಯವನ್ನು ಕಾಳಜಿಯಿಂದ… pic.twitter.com/PJ8Eg2sOoE— CM of Karnataka (@CMofKarnataka) May 21, 2023