ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಳೆದ ಚುನಾವಣೆಗಿಂತ ಕಡಿಮೆ ಸ್ಥಾನ ಗೆದ್ದಿತ್ತು. ಕೇವಲ 16 ಸ್ಥಾನಗಳನ್ನು ಈ ಬಾರಿಯ ಚುನಾವಣೆಯಲ್ಲಿ ಗೆದ್ದುಕೊಂಡಿತ್ತು. ಈ ಹಿನ್ನಲೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ನೈತಿಕ ಹೊಣೆಹೊತ್ತು ತಾವು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ.
ನನ್ನ ರಾಜೀನಾಮೆ ಪತ್ರವನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.