ಬೆಂಗಳೂರು : ಮೇ 27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶನಿವಾರವೇ ನೂತನ ಸಚಿವರ ಪ್ರಮಾಣವಚನ ನಡೆಯಲಿದ್ದು, ಎಲ್ಲಾ ಖಾತೆ ಭರ್ತಿಗೆ ಗ್ರೀನ್ಸಿಗ್ನಲ್ ಸಿಕ್ಕಿದೆ.
ಸಿಎಂ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದ್ದು, ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ಕಾರದ ಮನವಿ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶೀಘ್ರದಲ್ಲೇ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದು, ದೆಹಲಿಯ ಜಿಆರ್ಜಿ ರಸ್ತೆಯ ಕಾಂಗ್ರೆಸ್ ವಾರ್ ರೂಮ್ನಲ್ಲಿ ನಡೆಯುತ್ತಿದ್ದ ಕರ್ನಾಟಕ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಸಭೆ ಮುಕ್ತಾಯಗೊಂಡಿದೆ. ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಆದರೆ ನೂತನ ಸತಿವರ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ಮತ್ತು ಸಮಯ ನಿಗದಿಯಾಗಿದೆ. ಇಂದು 24 ನೂತನ ಸಚಿವರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ನವದೆಹಲಿ : ಮೇ 28 ರಂದು ನವದೆಹಲಿಯಲ್ಲಿ ನಡೆಯಲಿರುವ ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಾಗಿ ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗುರುವಾರ ಹೇಳಿದ್ದಾರೆ. ಉದ್ಘಾಟನೆಯನ್ನ ಬಹಿಷ್ಕರಿಸಲು ಅದೇನು ಬಿಜೆಪಿ ಮತ್ತು ಆರ್ ಎಸ್ ಎಸ್ ಕಚೇರಿಯೇ.? ಎಂದು ಪ್ರಶ್ನಿಸಿದ್ದರೆ.
‘ನಾನು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಭಾಗವಹಿಸುತ್ತಿದ್ದೇನೆ. ಇದು ದೇಶದ ಆಸ್ತಿ. ಇದು ಯಾರೊಬ್ಬರ ವೈಯಕ್ತಿಕ ವಿಷಯವಲ್ಲ’ ಎಂದು ದೇವೇಗೌಡರು ಹೇಳಿದರು.ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ನಡೆದ ಜೆಡಿಎಸ್ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಇದು ಯಾರೊಬ್ಬರ ವೈಯಕ್ತಿಕ ಕಾರ್ಯಕ್ರಮವಲ್ಲ, ಇದು ದೇಶದ ಕಾರ್ಯಕ್ರಮ. ‘ಆ ಭವ್ಯವಾದ ಕಟ್ಟಡವನ್ನ ದೇಶದ ಜನರ ತೆರಿಗೆ ಹಣದಿಂದ ನಿರ್ಮಿಸಲಾಗಿದೆ. ಅದು ದೇಶಕ್ಕೆ ಸೇರಿದೆ. ಇದು ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಚೇರಿಯಲ್ಲ’ ಎಂದರು. ಇನ್ನು ಮಾಜಿ ಪ್ರಧಾನಿಯಾಗಿ ಮತ್ತು ದೇಶದ ಪ್ರಜೆಯಾಗಿ ಹೊಸ ಸಂಸತ್ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.ಅಂದ್ಹಾಗೆ, ಪ್ರಧಾನಿ ನರೇಂದ್ರ ಮೋದಿ ಅವ್ರು ಭಾನುವಾರ ನೂತನ ಸಂಸತ್ ಭವನವನ್ನ ಉದ್ಘಾಟಿಸಲಿದ್ದಾರೆ.ಶನಿವಾರ 11:45ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.