ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾತಿ ಕೊರತೆಯಿದ್ದಂತ ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆಯಲ್ಲಿ ಖಾಸಗಿ ಅಭ್ಯರ್ಥಿಗಳಾಗಿ ಅವಕಾಶ ನೀಡಲಾಗಿತ್ತು. ಈ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಳ್ಳಲು ಮತ್ತೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕರಾದಂತ ಹೆಚ್ ಎನ್ ಗೋಪಾಲಕೃಷ್ಣ ಅವರು ಸುತ್ತೋಲೆ ಹೊರಡಿಸಿದ್ದಾರೆ. 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ನೋಂದಣಿಸಿಕೊಂಡು, ಹಾಜರಾತಿ ಕೊರತೆಯಿಂದ ರಾಜ್ಯಾಧ್ಯಂತ ಅಂದಾಜು 26,900 ವಿದ್ಯಾರ್ಥಿಗಳ ನೋಂದಣಿಯನ್ನು ಮುಖ್ಯ ಶಿಕ್ಷಕರು ಶಾಲಾ ಹಂತದಲ್ಲಿ ರದ್ದುಪಡಿಸಲಾಗಿರುವ ಸಂಬಂಧ ಮುಖ್ಯ ಪರೀಕ್ಷೆಗೆ ಹಾಜರಾಗಿರುವುದಿಲ್ಲ ಎಂದಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಸದರಿ ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣದ ವ್ಯಾಸಂಗದಿಂದ ವಂಚಿತರಾಗದಂತೆ ಕ್ರಮವಹಿಸುವ ಸಲುವಾಗಿ ಜೂನ್-2023ರ ತಿಂಗಳಿನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅವಕಾಶವನ್ನು ದಿನಾಂಕ 26-05-2023ರವರೆಗೆ ಕಲ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಈಗ ವಿದ್ಯಾರ್ಥಿಗಳು ಹಾಗೂ ಪೋಷಕರು ದಿನಾಂಕ ವಿಸ್ತರಿಸಲು ಕೋರಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ದಿನಾಂಕ 29-05-2023ರ ಸಂಜೆ 5.30ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.