ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದರು. ಬೆಂಗಳೂರು: ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.
ತಾವು ಓದಿದ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೋಮವಾರ ಭೇಟಿ ನೀಡಿದ ಅವರು, ತಮ್ಮ ಶಿಕ್ಷಕ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯಿತಿ ಮಟ್ಟದಲ್ಲಿ ನಮೋದಯ ಮಾದರಿ ಉನ್ನದ ಗುಣಮಟ್ಟದ ಶಾಲೆಗಳ ಆರಂಬಿಸಲು ಚಿಂತನೆಗಲು ನಡೆಯುತ್ತಿವೆ. ಈ ಕುರಿತು ಚುನಾವಣಾ ಪ್ರಣಾಳಿಕೆಯಲ್ಲಿಯೂ ತಿಳಿಸಿದ್ದೆವು.
ಈ ನಿಟ್ಟಿನಲ್ಲಿ ನಾನು ಪರಮೇಶ್ವರ್ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರ ಜೊತೆಗೆ ಸಮಗ್ರ ಚರ್ಚೆ ನಡೆಸುತ್ತೇವೆ. ಮಾಜಿ ಶಿಕ್ಷಕರಿಂದಲೂ ಸಲಹೆಗಳನ್ನು ಪಡೆಯುತ್ತೇವಂದು ಹೇಳಿದರು