ಉಡುಪಿ: ಉಡುಪಿಯ ಬಲಾಯಿಪಾದೆ ಕ್ರಾಸ್ ನಲ್ಲಿ ಮಂಗಳವಾರ ಮುಂಜಾನೆ ಗೇರುಬೀಜ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ.ಲಾರಿ ಪಲ್ಟಿಯಾದ ರಭಸಕ್ಕೆ ಲಾರಿಯ ಮುಂಭಾಗಕ್ಕೆ ಹಾನಿಯಾಗಿದೆ. ಲಾರಿಯಲ್ಲಿದ್ದ ಅಪಾರ ಪ್ರಮಾಣದ ಗೇರುಬೀಜ ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.