ಉಡುಪಿ : 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಳಕಾಡು ಉಡುಪಿ ಸರಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಘಾಟಿಸಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯ ಪುಸ್ತಕಗಳನ್ನು ಶಾಸಕರು ವಿತರಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಮನೋ ವೈದ್ಯರಾದ ಡಾ. ಪಿ. ವಿ.ಭಂಡಾರಿ, ಡಿಜಿಎಂ ಕೆನರಾ ಬ್ಯಾಂಕ್ ಸಬಿತಾ ನಾಯಕ್,ಡಾ. ಅಶೋಕ್ ಕಾಮತ್, ಬಿಇಒ ಚಂದ್ರೇಗೌಡ, ಎಸ್ ಡಿಎಂಸಿ ಉಪಾಧ್ಯಕ್ಷ ಶ್ಯಾಮ್ ಕುಡ್ವ, ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಪ್ರಕಾಶ್ ಚಂದ್ರ, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಗಣಪತಿ, ವಳಕಾಡು ವಾರ್ಡಿನ ನಗರ ಸಭಾ ಸದಸ್ಯರಾದ ಶ್ರೀಮತಿ ರಜನಿ ಹೆಬ್ಬಾರ್, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕುಸುಮ ಹಾಗೂ ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.