ಉಡುಪಿ: ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜೂನ್ 8 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವು ಕೇಂದ್ರ ಸರಕಾರದ ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆಯಲಿದೆ.
ಕಾರ್ಯಕ್ರಮದಲ್ಲಿ ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಫೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ
ಹೆಚ್ಚಿನ ವಿವರಗಳಿಗೆ ನೆಹರು ಯುವ ಕೇಂದ್ರ, ಜಿಲ್ಲಾಡಳಿತ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574992, 8762114883, 9980530553 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.