ಬೆಂಗಳೂರು : ಹೊಸದಾಗಿ BPL ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ನಾಳೆಯಿಂದಲೇ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಹೊಸ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಹಾರ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.
ಇದೀಗ ನಾಳೆಯಿಂದಲೇ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 3 ತಿಂಗಳಿಂದ ಆಹಾರ ಇಲಾಖೆ ವೆಬ್ ಸೈಟ್ ಕ್ಲೋಸ್ ಆಗಿತ್ತು, BPL ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ನಾಳೆಯಿಂದಲೇ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ .
2021-22 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಕೋರಿ ರಾಜ್ಯಾದ್ಯಂತ ಸಲ್ಲಿಕೆಯಾಗಿರುವ 7,61,902 ಅರ್ಜಿಗಳ ಪೈಕಿ ,18,046 ಅರ್ಜಿಗಳು ವಿಲೇವಾರಿಯಾಗಿವೆ. 2,60,418 ಅರ್ಜಿಗಳು ಅನುಮೋದನೆಯಾದರೆ, 1,57,625 ಅರ್ಜಿಗಳು ತಿರಸ್ಕೃತಗೊಂಡಿವೆ. 3,43,856 ಅರ್ಜಿಗಳು ಬಾಕಿ ಉಳಿದಿದ್ದು, ವಿಲೇವಾರಿಗೆ ಸರ್ಕಾರದ ಅನುಮತಿಗಾಗಿ ಆಹಾರ ಇಲಾಖೆ ಕಾಯುತ್ತಿದೆ. ಅನುಮತಿ ಸಿಕ್ಕ ತಕ್ಷಣ ಪ್ರಕ್ರಿಯೆ ಶುರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದು, 3,30,02 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 ಬಿಪಿಎಲ್ ಕಾರ್ಡ್ ಗಳಿವೆ. ಕೆಲ ಕಾರ್ಡ್ ಗಳನ್ನು ಎಪಿಎಲ್ ಗೂ ಪರಿವರ್ತಿಸಲಾಗಿದೆ.ಬೆಂಗಳೂರಿನಲ್ಲಿ 34,705, ವಿಜಯಪುರದಲ್ಲಿ 28, 735, ಕಲಬುರಗಿ 16,945, ಬೆಳಗಾವಿ 16,765, ರಾಯಚೂರು 16,693 ಹಾಗೂ ಚಿತ್ರದುರ್ಗದಲ್ಲಿ 16,537 ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.