ಉಡುಪಿ: ಮಾದಕ ವಸ್ತುಗಳ ದಂದೆ ಕರಾವಳಿ ಪ್ರದೇಶದಲ್ಲಿ ನಡೆಯುತ್ತಿದೆ ಸೆನ್ಸಿಟಿವ್ ಗಳನ್ನು ಗುರಿ ಮಾಡಿ ಸರಬರಾಜು ಮಾಡಲಾಗುತ್ತಿದೆ ಡ್ರಗ್ ಪೆಡ್ಲರ್ಸ್ ಕಂಟ್ರೋಲ್ ಮಾಡುತ್ತೇವೆ ಡ್ರಗ್ ಮಾಫಿಯಾ ತೀವ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಯಾವುದೇ ಬೆಲೆ ತೆತ್ತಾದರೂ ನಿಲ್ಲಿಸಬೇಕು ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ ಸಮಾಜದ ಸ್ಚಾಸ್ತ್ಯ ಹಾಳು ಮಾಡಿ ಕೋಮುವಾದ ಪ್ರಚೋದನೆ ಮಾಡುವ ಕೆಲಸ ಸಹಿಸಲ್ಲ ಎಂದು ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ಜನರನ್ನು ಸಬಲೀಕರಣಗೊಳಿಸಲು ಸರ್ಕಾರ ಎಲ್ಲಾ ಐದು ಯೋಜನೆಗಳನ್ನು ತಂದಿದೆ. ಆತಂಕ ಪಡುವ ಅಗತ್ಯವಿಲ್ಲ, ರಾಜ್ಯ ಸರ್ಕಾರ ಸದಾ ನಿಮ್ಮೊಂದಿಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ. ಎಲ್ಲಾ ಐದು ಯೋಜನೆಗಳನ್ನು ಒದಗಿಸಲು ರಾಜ್ಯ ಸರ್ಕಾರದ ಹಣಕಾಸು ವ್ಯವಸ್ಥೆಗೆ ತೊಂದರೆಯಾಗುವುದಿಲ್ಲ, ಅದು ಸುರಕ್ಷಿತವಾಗಿದೆ. ಗ್ಯಾರಂಟಿ ಕಾರ್ಡ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಬಡವರು, ಹಿಂದುಳಿದ ವರ್ಗದವರಿಗೆ ಬೆಂಬಲವಿಲ್ಲ ಎಂಬುದನ್ನು ತೋರಿಸುತ್ತದೆ. ರಾಜ್ಯ ಗೃಹ ಸಚಿವನಾಗಿ ಇದು ಮೂರನೇ ಬಾರಿಗೆ ನಾನು ಯಾವಾಗಲೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ. ಸಂಸದರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು, ಅಭ್ಯರ್ಥಿ ಯಾರು ಎಂಬುದನ್ನು ಜನರೇ ನಿರ್ಧರಿಸುತ್ತಾರೆ. ಮುಂದಿನ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಧಿಕಾರ ಹಿಡಿಯಬೇಕು. ನಾನು ಉಡುಪಿಗೆ ಭೇಟಿ ನೀಡುತ್ತೇನೆ ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದರು.
ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ, ಕಾರ್ಯಾಧ್ಯಕ್ಷ ಮಂಜುನಾಥ ಬಂಡಾರಿ, ಎಂಎಲ್ ಸಿ ರಮೇಶ್ ಕಾಮಂಚನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಇತರರು ಉಪಸ್ಥಿತರಿದ್ದರು.