ಬೆಂಗಳೂರು: ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು. 2015ರ ಲೋಕಾಯುಕ್ತ ಪೊಲೀಸರು ದಾಖಲಿಸಿಕೊಂಡಿದ್ದಂತ ದೂರನ್ನು ಬುಧವಾರ ಹೈಕೋರ್ಟ್ ರದ್ದುಪಡಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಡಿನೋಟಿಫೇಕನ್ ಅಕ್ರಮ ಸಂಬಂಧ ಡಿಸೆಂಬರ್ 19, 2015ರಲ್ಲಿ ಲೋಕಾಯುಕ್ತ ಪೊಲೀಸರಿಂದ ದಾಖಲಾಗಿದ್ದಂತ ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಈ ಹಿಂದೆ ಸಿಎಜಿ ವರದಿ ಆಧರಿಸಿ 15 ಕೇಸ್ ಗಳನ್ನು ರದ್ದುಪಡಿಸಲಾಗಿದೆ. ಹಿಂದಿನ ತೀರ್ಪು ಆಧರಿಸಿ ಡಿ.19, 2015ರ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ನೀಡಿದೆ.
ಅಂದಹಾಗೇ ಮಾಜಿ ಸಿಎಂ ಯಡಿಯೂರಪ್ಪ ಅವರು, ಸಿಎಂ ಆಗಿದ್ದಂತ ಅವಧಿಯಲ್ಲಿ ನಡೆದಿದ್ದಂತ ಡಿನೋಟಿಫಿಕೇಷನ್ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಎಲ್ಲವನ್ನು ಸಿಎಜಿ ವರದಿಯನ್ನು ಆಧರಿಸಿ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.