ಕಟಪಾಡಿ : ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಓರ್ವ ಸಾವಿಗೀಡಾದ ಘಟನೆ ರವಿವಾರ (ಜೂ.11 ರಂದು) ಬೆಳಿಗ್ಗೆ ನಡೆದಿದೆ.
ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಮೃತರನ್ನು ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ.
ಇವರು ಮಲ್ಲಿಗೆ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು.
ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ
ಬಸ್ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕಆಗಮಿಸಿದ್ದು ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ