ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ
ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಕ್ತಿ ಯೋಜನೆಯನ್ನು ಸಂತೋಷವಾಗಿ ಉದ್ಘಾಟಿಸಿದ್ದೇವೆ.
ಸಾಮಾಜಿಕ ಆರ್ಥಿಕ ಅಸಮಾನತೆಗೆ ಮಹಿಳೆಯರು ಒಳಗಾಗಿದ್ದಾರೆ. ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಹೆಚ್ಚು ಭಾಗಿಯಾಗಬೇಕು. ಮಹಿಳೆಯರು ಹೆಚ್ಚು ಭಾಗಿಯಾದ್ರೆ ದೇಶ ಪ್ರಗತಿಯತ್ತ ಸಾಗುತ್ತದೆ. 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳು ಮಹಿಳೆಯರಿಗೆ ಅನುಕೂಲವಾಗಿವೆ ಎಂದು ಹೇಳಿದ್ದಾರೆ.
ಗ್ಯಾರಂಟಿಗಳ ಟೀಕೆಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಜುಲೈ 1 ರಿಂದ ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತೇವೆ. ಸುಮ್ಮನೆ ಗೇಲಿ ಮಾಡುವವರು ಮನುಸ್ಮೃತಿ ಮನಸ್ಥಿತಿಯವರು. ಗೇಲಿ ಮಾಡುವವರ ಮಾತಿಗೆ ಸೊಪ್ಪು ಹಾಕಲ್ಲ ಗ್ಯಾರಂಟಿ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಜನರು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.