ಶಿವಮೊಗ್ಗ: ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣ ಉದ್ಘಾಟನೆಗೊಂಡು ನಾಲ್ಕೈದು ತಿಂಗಳು ಕಳೆದರೂ ಈವರೆಗೆ ಒಂದೇ ಒಂದು ವಿಮಾನ ಹಾರಾಟ ಸಹ ಮಾಡಿಲ್ಲ.
ಈ ಮಧ್ಯೆ ಸರ್ಕಾರ ಬದಲಾವಣೆಯಿಂದ ವಿಮಾನ ಹಾರಾಟ ಇನ್ನಷ್ಟು ವಿಳಂಬವಾಗಲಿದೆ ಎಂದು ಹೇಳಲಾಗಿತ್ತು.
ಆದರೆ ಆ.11ರಿಂದಲೇ ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಸಂಚಾರ ಅಧಿಕೃತವಾಗಿ ಆರಂಭಗೊಳ್ಳುವುದು ಖಚಿತವಾಗಿದೆ. ಬೆಂಗಳೂರು- ಶಿವಮೊಗ್ಗ ಮಾರ್ಗಕ್ಕೆ 2,500ರಿಂದ 3,500 ರೂ. ತನಕ ದರ ನಿಗದಿ ಆಗುವ ನಿರೀಕ್ಷೆ ಇದೆ.
ಶೀಘ್ರದಲ್ಲೇ ಇಂಡಿಗೋ ವೆಬ್‌ಸೈಟ್ ಮೂಲಕ ಟಿಕೆಟ್ ಬುಕ್ ಕೂಡ ಮಾಡಬಹುದಾಗಿದೆ. ಕೆಲವೇ ದಿನಗಳಲ್ಲಿ ಬುಕ್ಕಿಂಗ್ ಸಹ ಆರಂಭವಾಗಲಿದೆ. ವಿಮಾನ ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಶಿವಮೊಗ್ಗಕ್ಕೆ 10.30ಕ್ಕೆ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಡುವ ವಿಮಾನ 1.30ಕ್ಕೆ ಬೆಂಗಳೂರು ತಲುಪಲಿದೆ.