ಉಡುಪಿ: ಸದಾ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವ ಫ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ಉಡುಪಿ ಸಂಸ್ಥೆ ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಯಲ್ಲಿ ಪರಿಣಾಮಕಾರಿ ಎನ್ನಲಾದ ಔಷಧೀಯ ಗುಣವುಳ್ಳ ಲಕ್ಷಣ ಫಲ ಹಾಗೂ ಇನ್ನಿತರ ಔಷಧೀಯ ಸಸ್ಯಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಜೂನ್ 15 ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ಭುಜಂಗ ಪಾರ್ಕಿನಲ್ಲಿ ಹಮ್ಮಿಕೊಂಡಿದೆ.
ಜಲ್ಲೆಯ ಜನತೆಗೆ ಕ್ಯಾನ್ಸರ್ ಕಾಯಿಲೆಗೆ ಔಷಧೀಯ ಗುಣವುಳ್ಳ ಲಕ್ಷ್ಮಣ ಫಲವು ಅತೀ ಸುಲಭವಾಗಿ ಮತ್ತು ಉಚಿತವಾಗಿ ದೊರಕಿಸುವ ನಿಟ್ಟಿನಲ್ಲಿ ಮತ್ತು ಈಗಿನ ದಿನಗಳಲ್ಲಿ ತಾಪಮಾನ ಹೆಚ್ಚಳ ಮತ್ತು ಕಡಿಮೆ ಮಳೆ, ನೀರಿನ ಸಮಸ್ಯೆ, ಕಲುಷಿತ ಗಾಳಿಯಿಂದಾಗಿ ಪರಿಸರ ಪ್ರತಿಕೂಲ ವಾಗಿದ್ದು. ಈ ನಿಟ್ಟಿನಲ್ಲಿ ಪರಿಸರ ರಕ್ಷಿಸುವ ಸದ್ದುದ್ದೇಶದಿಂದ ಜಿಲ್ಲೆಯಲ್ಲಿ ಸರಿಸುಮಾರು 1 ಸಾವಿರಕ್ಕೂ ಮಿಕ್ಕಿ ಲಕ್ಷ್ಮಣ ಫಲದ ಗಿಡ ಮತ್ತು ಇನ್ನಿತರ ಪರಿಸರಕ್ಕೆ ಪೂರಕವಾದ ಗಿಡಗಳನ್ನು ಉಚಿತವಾಗಿ ನೀಡಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ನೆಟ್ಟು ರಕ್ಷಣಾಬೇಲಿ ಹಾಕಿ ಪೋಷಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ಈ ಸಮಾಜ ಸೇವಾ ಕಾರ್ಯದಲ್ಲಿ ಭಾಗವಹಿಸಿ ,ಆರೋಗ್ಯವಂತ ಸಮಾಜ ಮತ್ತು ಜಿಲ್ಲೆಯ ಜನತೆ, ಪ್ರಾಣಿ, ಪಕ್ಷಿಗಳಿಗೆ ಉತ್ತಮವಾದ ಗಾಳಿ, ಮಳೆ, ನೀರು, ನೆರಳು, ಆಹಾರ, ಔಷಧಿ ದೊರಕಿಸುವಲ್ಲಿ ಸಹಕರಿಸಿ .ಈ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಹಾಗೂ ಈ ಸಮಾಜ ಸೇವಾ ಕಾರ್ಯದ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ವಿನಂತಿಸಿದ್ದಾರೆ.