ಮಣಿಪಾಲ : ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಉಡುಪಿ ಜಿಲ್ಲಾ ಎಸ್.ಪಿ ಶ್ರೀ ಅಕ್ಷಯ್ ಮಚಿಂದ್ರ ಹಾಕೆ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ, ದಿನಾಂಕ:16.06.2023 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗಾ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡಲು ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದ್ದು ವಿದ್ಯಾರ್ಥಿಗಳ ಬಳಿ 35 ಸಾವಿರ ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ (MDMA) ಮಾದಕ ದ್ರವ್ಯ ಪತ್ತೆಯಾಗಿದ್ದು, ಜೊತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್‌ಗಳನ್ನು ಹಾಗೂ ವಿದ್ಯಾರ್ಥಿಗಳಾದ 1. ನಿಭೀಷ್ ಪ್ರಾಯ:23 ವರ್ಷ ತಂದೆ: ಸಂತೋಷ್, 2. ಅಮಲ್, ಪ್ರಾಯ:22 ವರ್ಷ , ತಂದೆ: ಮುರುಳಿಧರನ್ ರವರನ್ನು ವಶಕ್ಕೆ ಪಡೆಯಲಾಗಿದೆ.
ಈ ಇಬ್ಬರೂ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮೂಲತ: ಕೇರಳ ರಾಜ್ಯದ ನಿವಾಸಿಗಳಾಗಿರುತ್ತಾರೆ. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಸದರಿ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಅಕ್ಷಯ್ ಮಚಿಂದ್ರ ಹಾಕೆ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿದ್ಧಲಿಂಗಪ್ಪ ಟಿ ಕೆ.ಎಸ್.ಪಿ.ಎಸ್ ರವರು ತಮ್ಮ ತಂಡದ ಸದಸ್ಯರಾದ ದಿನಕರ ಕೆ.ಪಿ, ಡಿ.ವೈ.ಎಸ್.ಪಿ ಉಡುಪಿ , ದೇವರಾಜ ಟಿ.ವಿ ಪೊಲೀಸ್ ನಿರೀಕ್ಷಕರು ಮಣಿಪಾಲ ಠಾಣೆ, ಪಿಎಸ್‌ಐ ಅಬ್ದುಲ್ ಖಾದರ್ ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ನಾಗೇಶ್ ನಾಯಕ್ , ಹೆಚ್.ಸಿ. ಸುಕುಮಾರ್ ಶೆಟ್ಟಿ, ಹೆಚ್.ಸಿ. ಅಬ್ದುಲ್ ರಜಾಕ್, ಹೆಚ್ ಸಿ ಇಮ್ರಾನ್ , ಪಿ.ಸಿ ಚೆನ್ನೇಶ್ , ಪಿಸಿ ಆನಂದಯ್ಯ, ಪಿಸಿ ಅರುಣ್ ಕುಮಾರ್, ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯ ಸಿಡಿಆರ್ ಸೆಕ್ಷನ್‌ನ ದಿನೇಶ್ ರವರನ್ನು ಒಳಗೊಂಡ ತಂಡ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದಾರೆ.